ದಾವಣಗೆರೆ, ಜೂ.27 – ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಕೆಂಪೇಗೌಡ ಜಯಂತಿಯನ್ನು ಕೋವಿಡ್ ಹಿನ್ನೆಲೆಯಲ್ಲಿ ನಗರದ ಜಿಲ್ಲಾಡಳಿತ ಭವನದಲ್ಲಿ ಇಂದು ಸರಳವಾಗಿ ಆಚರಿಸಲಾಯಿತು.
ಜಿಲ್ಲಾ ಪಂಚಾಯತಿ ಸಿಇಒ ಡಾ.ವಿಜಯ ಮಹಾಂತೇಶ ದಾನಮ್ಮನವರ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಜೆ. ನಾಗರಾಜ, ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಯಶೋಧ ಯೋಗೀಶ್, ಪತ್ರಕರ್ತ ಬಿ.ಎನ್. ಮಲ್ಲೇಶ್,
ಎಂ.ಎಸ್. ರಾಮೇಗೌಡ, ಗೋಪಾಲಗೌಡ್ರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.