ದಾವಣಗೆರೆ, ಮಾ.25- ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಗುರುವಾರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್ ಕೋವ್ಯಾಕ್ಸಿನ್ ಲಸಿಕೆ ಪಡೆದರು. ಲಸಿಕೆಯ ಮೊದಲನೇ ಡೋಸ್ ಪಡೆದ ಶಾಸಕರು, ನಂತರ ಅರ್ಧ ಗಂಟೆ ನಿಗಾವಣೆಯಲ್ಲಿದ್ದು, ಮನೆಗೆ ತೆರಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ಡಾ.ರಾಘವೇಂದ್ರ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
December 26, 2024