ಸ್ವಾತಂತ್ರ್ಯೋತ್ಸವ : ಆನ್‌ಲೈನ್ ಝೂಮ್ ಮೀಟಿಂಗ್‌ನಲ್ಲಿ ಎಸ್ಸೆಸ್ಸೆಂ

ದಾವಣಗೆರೆ, ಆ.10 – ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪ್ರಯುಕ್ತ ಝೂಮ್ ಆನ್‍ಲೈನ್‌ ಮೀಟಿಂಗ್ ಇಂದು ನಡೆಯಿತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಲೀಂ ಮಹಮದ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಸಭೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್, ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ .ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಸಾಮಾಜಿಕ ಜಾಲತಾಣ ದ ಕೆ.ಎಲ್.ಹರೀಶ್ ಬಸಾಪುರ ಉಪಸ್ಥಿತರಿದ್ದರು.

error: Content is protected !!