ಬೆಂಗಳೂರು, ಸೆ.15- ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಕೊಡಮಾಡುವ ಪ್ರತಿಷ್ಠಿತ `ಸಾಹಿತ್ಯಶ್ರೀ ಗೌರವ ಪ್ರಶಸ್ತಿ’ಗೆ ಭಾಜನರಾಗಿರುವ ನಗರದ ಹಿರಿಯ ಲೇಖಕಿ ಬಿ.ಟಿ.ಜಾಹ್ನವಿ ನಿರಂಜನ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಸಚಿವ ವಿ.ಸುನೀಲ್ ಕುಮಾರ್, ಸಂಸದ ತೇಜಸ್ವಿ ಸೂರ್ಯ, ಅಕಾಡೆಮಿ ಅಧ್ಯಕ್ಷ ಡಾ. ಬಿ.ವಿ.ವಸಂತ್‌ಕುಮಾರ್, ರಿಜಿ ಸ್ಟ್ರಾರ್ ಕರಿಯಪ್ಪ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
February 24, 2025