ದಾವಣಗೆರೆ, ಮೇ 10- ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇಲ್ಲಿನ ಆಜಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಆರ್ ರಸ್ತೆ ಹತ್ತಿರದ ಮುದೇಗೌಡರ ಶಾಲೆ ಎದುರಿನಲ್ಲಿನ ಗೋದಾಮಿನಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿರುವ ಬಗ್ಗೆ ತಹಸೀಲ್ದಾರ್ ಗಿರೀಶ್ ಅವರಿಂದ ಬಂದ ಖಚಿತ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕ ರವಿ ಶಿವಮೂರ್ತಿ ಹಿಪ್ಪರಗಿ ದಾಳಿ ನಡೆಸಿ ಸುಮಾರು 600 ಚೀಲ ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ.
February 25, 2025