ದಾವಣಗೆರೆ, ಮೇ 18- ನಗರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಆವರಣದಲ್ಲಿ ರೋಟರಿ ಸಂಸ್ಥೆಯಿಂದ ರೆಡ್‌ಕ್ರಾಸ್ ಸಂಸ್ಥೆಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಹಸ್ತಾಂತರಿಸಲಾಯಿತು.
ರೋಟರಿ ಜಿಲ್ಲಾ ರಾಜ್ಯಪಾಲ ನಯನ ಪಾಟೀಲ್, ರೆಡ್‌ಕ್ರಾಸ್ ಚೇರ್ಮನ್ ಡಾ.ಎ.ಎಂ. ಶಿವಕುಮಾರ್ ಮಾತನಾಡಿ, ರೋಟರಿ ಸಂಸ್ಥೆಯ ಸೇವಾ ಕಾರ್ಯವನ್ನು ತಿಳಿಸಿದರಲ್ಲದೆ, ಕೊರೊನಾ ಹರಡದಂತೆ ವಹಿಸಬೇಕಾದ ಎಚ್ಚರಿಕಾ ಕ್ರಮಗಳನ್ನು ತಿಳಿಸಿದರು. ರೋಟರಿ ಅಧ್ಯಕ್ಷರು, ರೆಡ್‌ಕ್ರಾಸ್ ಸಂಸ್ಥೆ ನಿರ್ದೇಶಕರು, ಪದಾಧಿಕಾರಿಗಳು, ಭಾಗವಹಿಸಿದ್ದರು. ಪತ್ರಿಕಾ ವಿತರಕರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು.
December 23, 2024