ದಾವಣಗೆರೆ, ಮೇ 16- ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ವತಿಯಿಂದ ಸಂಘದ ರಾಜ್ಯ ಉಪಾಧ್ಯಕ್ಷ ಎಲ್.ಎಮ್. ಹನುಮಂತಪ್ಪ ನೇತೃತ್ವದಲ್ಲಿ ಕೊರೊನಾ ವಾರಿಯರ್ಸ್ಗಳಾದ ನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಮತ್ತು ನೇರ ಪಾವತಿ ಪೌರ ಕಾರ್ಮಿಕರಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಲಾಯಿತು.
ಪಾಲಿಕೆ ಪೌರ ಕಾರ್ಮಿಕರ ಕಚೇರಿ ಬಳಿ, ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೌರ ಕಾರ್ಮಿಕರಿಗೆ ಸಾಮಾಜಿಕ ಅಂತರದಲ್ಲಿ ಕೂರಿಸಿ ಆಹಾರದ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ನಗರ ಪಾಲಿಕೆಯ ಮೇಯರ್ ಬಿ.ಜಿ. ಅಜಯ್ ಕುಮಾರ್, ಪಾಲಿಕೆ ಸದಸ್ಯ ಸೋಗಿ ಶಾಂತಕುಮಾರ್, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ನಗರ ಯೋಜನಾ ಮತ್ತು ಸುಧಾರಣೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಟಿ. ವೀರೇಶ್, ನಗರ ಪಾಲಿಕೆ ಆರೋಗ್ಯ ಇಲಾಖೆಯ ಆರೋಗ್ಯ ಪರಿವೀಕ್ಷಕ ಡಾ. ಜೆ.ಎಮ್. ಸಂತೋಷ್, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಎಲ್.ಹೆಚ್. ಸಾಗರ್, ಪೌರ ಕಾರ್ಮಿಕರ ಸಂಘದ ಕಾರ್ಯದರ್ಶಿ ಬಿ. ಲೋಹಿತ್, ಎಂ. ಉಮೇಶ್, ಕೆ.ಸಿ. ಮಂಜುನಾಥ್, ಹೆಚ್. ರವಿವರ್ಧನ್, ಆರ್. ಮೂರ್ತಿ ಸೇರಿದಂತೆ ಇತರರು ಇದ್ದರು.
December 27, 2024