ದಾವಣಗೆರೆ, ಮೇ 29- ಕೊರೊನಾ ವೈರಸ್ ವಿರುದ್ಧದ ಹೋರಾಟ ದಲ್ಲಿ ಜೀವದ ಹಂಗು ತೊರೆದು ಶ್ರಮಿಸುತ್ತಿರುವ ಚಿಗಟೇರಿ ಜಿಲ್ಲಾಸ್ಪತ್ರೆಯ ವೈದ್ಯರುಗಳಿಗೆ ಕೆಪಿಸಿಸಿ ವಕ್ತಾರ ನಿಖಿಲ್ ಕೊಂಡಜ್ಜಿ ಅವರು 70 ಪಿಪಿಇ ಕಿಟ್ ಗಳನ್ನು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರ ಸಮ್ಮುಖ ದಲ್ಲಿ ಆಸ್ಪತ್ರೆ ಸರ್ಜನ್ ನಾಗರಾಜ್ ಅವರಿಗೆ ಹಸ್ತಾಂತರಿಸಲಾಯಿತು. ಕೆಪಿ ಸಿಸಿ ಸಾಮಾಜಿಕ ಜಾಲತಾಣದ ಕಾರ್ಯದರ್ಶಿ ಕೆ. ಎಲ್. ಹರೀಶ್ ಬಸಾ ಪುರ, ಕುರುಡಿ ಗಿರೀಶ್, ಡಾ. ಶಶಿಧರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
February 25, 2025