ಬಿತ್ತನೆ ಬೀಜ ಖರೀದಿ ಕೇಂದ್ರ

ಹೊನ್ನಾಳಿ, ಜೂ.9- ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ರಿಯಾಯ್ತಿ ದರದಲ್ಲಿ ಬಿತ್ತನೆ ಬೀಜ ಖರೀದಿ ಕೇಂದ್ರಕ್ಕೆ ಶಾಸಕ ಎಂ.ಪಿ. ರೇಣುಕಾಚಾರ್ಯ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ತಾಲ್ಲೂಕಿನಾದ್ಯಂತ ಮುಂಗಾರು ಆರಂಭವಾಗಿದ್ದು, ರೈತರು ಈಗಾಗಲೇ ಬಿತ್ತನೆಗೆ ಅಣಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ರೈತರಿಗೆ ಅನುಕೂಲವಾಗಲೆಂದು ರಿಯಾಯ್ತಿ ದರದಲ್ಲಿ ಬಿತ್ತನೆ ಬೀಜ ಖರೀದಿ ಕೇಂದ್ರ ಆರಂಭಿಸಲಾಗಿದೆ ಎಂದರು.

ಇದಲ್ಲದೇ ಗೋವಿನಕೋವಿ, ಚೀಲೂರು, ಸಾಸ್ವೆ ಹಳ್ಳಿ, ಕುಂದೂರು ಮತ್ತು ನ್ಯಾಮತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ದೊರೆಯಲಿದ್ದು, ಅದರ ಜೊತೆ ಹೆಚ್ಚುವರಿಯಾಗಿ ಕೆಂಚಿಕೊಪ್ಪದಲ್ಲಿ ಹೆಚ್ಚುವರಿ ಕೇಂದ್ರ ತೆರೆಯಲಾಗಿದೆ. ರೈತರು ಪಹಣಿ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ನೀಡಿ ಬಿತ್ತನೆ ಬೀಜ ಖರೀದಿಸುವಂತೆ ಮನವಿ ಮಾಡಿದರು.

ಜಿ.ಪಂ. ಸದಸ್ಯ ಎಂ.ಆರ್. ಮಹೇಶ್, ತಾ.ಪಂ. ಪ್ರಭಾರ ಅಧ್ಯಕ್ಷ ಕೆ.ಎಲ್. ರಂಗನಾಥ್, ತಾ.ಪಂ. ಸದಸ್ಯ ವಿಶ್ವನಾಥ್, ಸಹಾಯಕ ಕೃಷಿ ನಿರ್ದೇಶಕ ಅಧಿಕಾರಿ ಸುರೇಶ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ, ಬಿಜೆಪಿ ಮುಖಂಡರು, ವಿವಿಧ ಇಲಾಖೆ ಅಧಿಕಾರಿಗಳಿದ್ದರು.

error: Content is protected !!