ದಾವಣಗೆರೆ, ಜೂ.12- ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ನ್ಯಾಮತಿ ತಾಲ್ಲೂಕು ರಾಮೇಶ್ವರ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಪಾರಂಪರಿಕ ಕೃಷಿ ವಿಕಾಸ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.
ಜೀವಾಮೃತ ತಯಾರಿಕೆ, ಎರೆಗೊಬ್ಬರ ತಯಾರಿಕೆ, ಹಸಿರೆಲೆಗೊಬ್ಬರ ಸಸಿ ಗಳನ್ನು ಬೆಳೆಯುವುದು. ಸ್ಥಳೀಯವಾಗಿ ದೊರೆಯುವ ಕೃಷಿ ತ್ಯಾಜ್ಯಗಳನ್ನು ಗೊಬ್ಬ ರವಾಗಿ ಪರಿವರ್ತಿಸಿ ಕೃಷಿಗೆ ಬಳಸುವ ಪ್ರಾತ್ಯಕ್ಷಿಕೆಗಳನ್ನು ಪ್ರಾರಂಭಿಸಲಾಗಿದೆ.
ರೈತರು ಈ ಪದ್ಧತಿಗಳಿಂದ ವಿಷಮುಕ್ತ ಆಹಾರ ಬೆಳೆಗಳನ್ನು ಬೆಳೆಯುವುದರ ಜೊತೆಗೆ ರಾಸಾಯನಿಕ ಗೊಬ್ಬರದ ಖರ್ಚು ಕಡಿಮೆ ಮಾಡಬಹುದು ಎಂದು ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ವಿಜ್ಞಾನಿ ಎಂ.ಜಿ. ಬಸವನಗೌಡ ತಿಳಿಸಿದ್ದಾರೆ.