ದಾವಣಗೆರೆ, ಜೂ.12- ನಗರದ ಎ.ವಿ. ಕಮಲಮ್ಮ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಅಂದು ಕಾಲೇಜಿನ ಇಕೋ ಕ್ಲಬ್ ಸಹಯೋಗದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಾಂಶುಪಾಲ ಪ್ರೊ. ಪಿ.ಎಸ್. ಶಿವಪ್ರಕಾಶ್ ವಿವಿಧ ಬಗೆಯ ಸಸಿಗಳನ್ನು ನೆಡುವ ಮೂಲಕ ಚಾಲನೆ ನೀಡಿದರು. ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ಪ್ರಭಾವತಿ ಎಸ್. ಹೊರಡಿ ಸ್ವಾಗತಿಸಿದರು. ರಸಾಯನ ಶಾಸ್ತ್ರ ವಿಭಾಗದ ಪ್ರಭಾರ ಮುಖ್ಯಸ್ಥ ಪ್ರೊ. ಆರ್.ಆರ್. ಶಿವಕುಮಾರ್ ವಂದಿಸಿದರು.
February 25, 2025