ಹರಿಹರ, ಜೂ.12- ಹರಿಹರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಬೇವಿನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಕೊಮಾರನಹಳ್ಳಿ ಜಿ.ಬಿ. ಕುಮಾರ್ ಮತ್ತು ಉಪಾಧ್ಯಕ್ಷರಾಗಿ ಎಳೆಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಬಿ. ಮಂಜುನಾಥ ಇವರು ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಹಕಾರ ಅಭಿವೃದ್ಧಿ ಅಧಿಕಾರಿ ಎನ್.ಜಿ. ರುದ್ರಪ್ಪ ಚುನಾವಣಾಧಿಕಾರಿಯಾಗಿದ್ದರು.
January 8, 2025