ಜಿಲ್ಲಾಡಳಿತದಿಂದ ಕೆಂಪೇಗೌಡರ ಜಯಂತಿ ಆಚರಣೆ

ದಾವಣಗೆರೆ,  ಜೂ.27-   ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಇವರ ಜಂಟಿ ಆಶ್ರಯದಲ್ಲಿ ನಗರದ  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೆಂಪೇಗೌಡರ ಜಯಂತಿಯನ್ನು ಇಂದು ಸರಳವಾಗಿ ಆಚರಿಸಲಾಯಿತು. 

ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದೀಪಾ ಜಗದೀಶ್, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಜಿ.ಪಂ. ಉಪ ಕಾರ್ಯದರ್ಶಿ ಆನಂದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರವಿಚಂದ್ರ, ಹಿರಿಯ ಪತ್ರಕರ್ತ ಬಿ.ಎನ್. ಮಲ್ಲೇಶ್,  ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಂ.ಎಸ್. ರಾಮೇಗೌಡ, ಜಿಲ್ಲಾ ಕನ್ನಡ ಸೇನೆ ಅಧ್ಯಕ್ಷ ಗೋಪಾಲ ಗೌಡ ಹಾಗು ಸಮಾಜದ ಮುಖಂಡರು ಉಪಸ್ಥಿತರಿದ್ದರು.

error: Content is protected !!