ದಾವಣಗೆರೆ, ಆ.2- ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ನಗರದ ಕುವೆಂಪು ಕನ್ನಡ ಭವನದಲ್ಲಿ ಆಚರಿಸಲಾಯಿತು. ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಹೆಚ್.ಎಸ್.ಮಂಜುನಾಥ್ ಕುರ್ಕಿ ಅಧ್ಯಕ್ಷತೆ ವಹಿಸಿದ್ದರು. ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಎ.ಆರ್.ಉಜ್ಜನಪ್ಪ, ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಬಿ.ದಿಳ್ಯೆಪ್ಪ, ಕಚೇರಿ ಕಾರ್ಯದರ್ಶಿ ಜಿ.ಆರ್.ಷಣ್ಮುಖಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ದಾವಣಗೆರೆ ತಾಲ್ಲೂಕು ಅಧ್ಯಕ್ಷ ಬಿ.ವಾಮದೇವಪ್ಪ, ಗೌರವ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್ ಶೆಣೈ, ನಿರ್ದೇಶಕರುಗಳಾದ ಕೆ.ರಾಘವೇಂದ್ರ ನಾಯರಿ, ಬಿ.ವಿ.ರಾಜಶೇಖರ್, ಬಿ.ಎಂ.ಮುರುಗಯ್ಯ ಕುರ್ಕಿ, ಬಿ.ಎಸ್.ಜಗದೀಶ್, ಎಂ.ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.
December 25, 2024