ದಾವಣಗೆರೆ,ಅ.2- ಮಹಾತ್ಮ ಗಾಂಧೀಜಿ ಜನ್ಮ ದಿನದ ಪ್ರಯುಕ್ತ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಚ್ಛತೆ ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರೂ ಆದ ನಗರಪಾಲಿಕೆ ಸದಸ್ಯ ಆರ್.ಎಲ್. ಶಿವಪ್ರಕಾಶ್, ಪ್ರಧಾನ ಕಾರ್ಯದರ್ಶಿ ಯಲ್ಲೇಶ್, ಶ್ರೀಕಾಂತ್ ನಿಲಗುಂದ, ಪ್ರಶಾಂತ್, ಬೀರೇಶ್, ಅನಿಲ್, ರಾಜು, ಪ್ರದೀಪ ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
December 27, 2024