ಹರಪನಹಳ್ಳಿಯಲ್ಲಿ ಎಂ.ಪಿ.ವೀಣಾ ನೇತೃತ್ವದಲ್ಲಿ ರಾಲಿ
ಹರಪನಹಳ್ಳಿ, ಅ.4 – ಉತ್ತರ ಪ್ರದೇಶದ ಹತ್ರಾಸ್ ಗ್ರಾಮದ ದಲಿತ ಯುವತಿಯ ಮೇಲಿನ ಅತ್ಯಾಚಾರ ಖಂಡಿಸಿ ಸಂತ್ರಸ್ತೆಯ ಕುಟುಂಬದವರ ಭೇಟಿಗಾಗಿ ತೆರಳುತ್ತಿದ್ದ ನಾಯಕರಾದ ರಾಹುಲ್ಗಾಂಧಿ ಮತ್ತು ಪ್ರಿಯಾಂಕಾಗಾಂಧಿ ಅವರನ್ನು ವಶಕ್ಕೆ ಪಡೆದು ಅನುಚಿತವಾಗಿ ವರ್ತಿಸಿದ ಪೊಲೀಸರ ನಡೆ ಖಂಡಿಸಿ ಎಂ.ಪಿ.ಪ್ರಕಾಶ್ ಸಮಾಜ ಮುಖಿ ಟ್ರಸ್ಟ್ ಅಧ್ಯಕ್ಷರಾದ ಶ್ರೀಮತಿ ಎಂ.ಪಿ.ವೀಣಾ ಮಹಾಂತೇಶ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇಂದಿಲ್ಲಿ ಪಂಜಿನ ಮೆರವಣಿಗೆ ನಡೆಸಿದರು.