ಬಹುಜನ ಸಮಾಜ ಪಾರ್ಟಿಯಿಂದ ಪ್ರತಿಭಟನೆ
ದಾವಣಗೆರೆ, ಅ.3- ಉತ್ತರ ಪ್ರದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ನಿರಂತರ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೂಡಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ, ನಗರ ದಲ್ಲಿ ಇಂದು ಬಹುಜನ ಸಮಾಜ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಮಾಯಿಸಿದ್ದ ಸಮಿತಿ ಪದಾಧಿಕಾರಿ ಗಳು, ಉತ್ತರ ಪ್ರದೇ ಶದಲ್ಲಿ ರಾಷ್ಟ್ರಪತಿ ಆಡಳಿ ತವನ್ನು ಜಾರಿಗೆ ತರ ಬೇಕು ಹಾಗೂ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಗಳನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಅಪರ ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಡಿ. ಹನುಮಂತಪ್ಪ, ವಲಯ ಉಸ್ತು ವಾರಿ ಹೆಚ್. ಮಲ್ಲೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಬಾಬು, ಜಿಲ್ಲಾ ಉಪಾಧ್ಯಕ್ಷ ಫೈರೋಜ್ ಖಾನ್, ಮಹಮದ್ ಖಲೀಂ ಹಾಗೂ ಇತರರು ಭಾಗವಹಿಸಿದ್ದರು.