ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳಿಗೆ ಇಂಡಿಯನ್ ಯೂತ್ ಕಾಂಗ್ರೆಸ್ ತರಬೇತಿ ಸಂಯೋಜಕರು ಹಾಗೂ ಉಸ್ತುವಾರಿಯಾಗಿ ನೇಮಕಗೊಂಡಿರುವ ಹೆಚ್.ಜೆ. ಮೈನುದ್ದೀನ್ ಅವರನ್ನು ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಅವರು ಸನ್ಮಾನಿಸುವುದರ ಮೂಲಕ ಅಭಿನಂದಿಸಿದರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಸಾಧಿಕ್ ಸದ್ದಾಂ, ನಗರ ಪಾಲಿಕೆ ಸದಸ್ಯರಾದ ಕೆ. ಚಮನ್‌ಸಾಬ್, ಬೂದಾಳ್ ಬಾಬು ಮತ್ತಿತರರು ಉಪಸ್ಥಿತರಿದ್ದರು.
January 11, 2025