ಮಲೇಬೆನ್ನೂರು, ಅ.10- ಮಾಸ್ಕ್ ಧರಿಸದಿರುವ ಸಾರ್ವಜನಿಕರಿಗೆ ದಂಡ ಹಾಕುವ ಬಗ್ಗೆ ಪಟ್ಟಣದಲ್ಲಿ ಧ್ವನಿ ವರ್ಧಕದ ಮೂಲಕ ಜಾಗೃತಿ ಮೂಡಿಸಿದ್ದರೂ ಸಹ ಮಾಸ್ಕ್ ಹಾಕದ ಸಾರ್ವಜನಿಕರಿಗೆ ಪುರಸಭೆ ಅಧಿಕಾರಿಗಳು ದಂಡ ಹಾಕುತ್ತಿದ್ದಾರೆ. ಶುಕ್ರವಾರ 3500 ರೂ. ಹಾಗೂ ಮತ್ತು ಶನಿವಾರ 1600 ರೂ.ಗಳನ್ನು ಮಾಸ್ಕ್ ಹಾಕದವರಿಂದ ದಂಡ ವಸೂಲಿ ಮಾಡಿರುವ ಅಧಿಕಾರಿಗಳು, ಇದುವರೆಗೂ ಒಟ್ಟು 85 ಸಾವಿರ ರೂ. ದಂಡ ಹಾಕಿದ್ದಾರೆಂದು ಹೇಳಲಾಗಿದೆ. ಇದರಲ್ಲಿ ಪೊಲೀಸ್ ಇಲಾಖೆಯವರು ದಂಡ ಹಾಕಿರುವ ಹಣ 30 ಸಾವಿರ ರೂ. ಸೇರಿದೆ ಎಂದು ಮುಖ್ಯಾಧಿಕಾರಿ ಧರಣೇಂದ್ರಕುಮಾರ್ ತಿಳಿಸಿದ್ದಾರೆ. ಪಟ್ಟಣದಲ್ಲಿ ಪುರಸಭೆ ಮತ್ತು ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಒಟ್ಟಾಗಿ ಮಾಸ್ಕ್ ಧರಿಸುವ ಬಗ್ಗೆ ಜನರಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದಾರೆ.
January 11, 2025