ಹೊನ್ನಾಳಿ, ಜು.11- ತಾಲ್ಲೂಕು ಕಚೇರಿಯಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಹಿನ್ನೆಲೆಯಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಮಾತನಾಡಿದ ರೇಣುಕಾಚಾರ್ಯ, ಕೊರೊನಾ ಶಂಕಿತರು ಅವಮಾನವೆಂದು ಭಾವಿಸದೆ, ಖುದ್ದು ಆಸ್ಪತ್ರೆಗಳಿಗೆ ತೆರಳಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ತುಷಾರ್ ಬಿ. ಹೊಸೂರ್, ಪಿಎಸ್‌ಐ ತಿಪ್ಪೇಸ್ವಾಮಿ ಹಾಗೂ ಇನ್ನಿತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
December 23, 2024