ಮಲೇಬೆನ್ನೂರು ಜು, 14 – ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗೆ ಭಕ್ತರು ನೀಡಿರುವ ಹೊಸ ಇನ್ನೋವಾ ಕಾರಿಗೆ ಕನಕ ಗುರುಪೀಠದ ಬೆಳ್ಳೂಡಿ ಶಾಖಾ ಮಠದಲ್ಲಿ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ವಿಶೇಷ ಪೂಜೆ ಸಲ್ಲಿಸಿ, ಶುಭ ಕೋರಿದರು. ಈ ಸುದ್ದಿ ಸ್ವಲ್ಪ ಹೊತ್ತಿನಲ್ಲಿಯೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಎರಡೂ ಮಠಗಳ ಸಾಮರಸ್ಯದ ಬಗ್ಗೆ ಭಕ್ತರು ಸಂತಸ ವ್ಯಕ್ತಪಡಿಸಿದ್ದಾರೆ.
January 12, 2025