ಹರಿಹರ, ಜು.18- ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ತಾಲ್ಲೂಕು ಆಡಳಿತ, ನಗರಸಭೆ, ಪೊಲೀಸ್ ಇಲಾಖೆ, ಜಿಲ್ಲೆಯ ದುರ್ಗಾ ಕಮಾಂಡೋ ಪಡೆ ನಗರದ ಎಲ್ಲೆಡೆ ಸಂಚರಿಸಿ, ಜಾಗೃತಿ ಮೂಡಿಸಿದರು.
ನಗರದ ಪ್ರಮುಖ ಬಡಾವಣೆಗಳಲ್ಲಿ ಸಂಚಾರ ಮಾಡಿ, ಸಾರ್ವಜನಿಕರು ಮಾಸ್ಕ್ ಧರಿಸಿಕೊಂಡು ಓಡಾಡುವುದು, ಅಂತರ ಕಾಪಾಡಿಕೊಳ್ಳುವ ಹಾಗೂ ಸ್ಯಾನಿಟೈಸರ್ ಬಳಸುವ ಬಗ್ಗೆ ತಿಳಿ ಹೇಳಲಾಯಿತು.
ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ, ಪೌರಾಯುಕ್ತೆ ಎಸ್. ಲಕ್ಷ್ಮೀ, ಸಿಪಿಐ ಶಿವಪ್ರಸಾದ್, ಪಿಎಸ್‌ಐ ಎಸ್. ಶೈಲಜಾ ಮತ್ತು ವಿವಿಧ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.