ಮಲೆಬೆನ್ನೂರು, ಅ.27- ಇಲ್ಲಿನ ಪುರಸಭೆಯಲ್ಲಿ ಪ್ರಧಾನ ಮಂತ್ರಿಗಳ ಸ್ವಾನಿಧಿ ಯೋಜನೆ ಅಡಿಯಲ್ಲಿ ಬೀದಿ ವ್ಯಾಪಾರಿಗಳಿಗೆ ಇರುವ ಸೌಲಭ್ಯಗಳ ಕುರಿತಾಗಿ ಯೋಜನಾ ನಿರ್ದೇಶಕರಾದ ಶ್ರೀಮತಿ ನಜ್ಮಾ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಸ್ವಾನಿಧಿ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಬೇಕಾದ ಮಾಹಿತಿಯನ್ನು ನಜ್ಮಾ ಅವರು ನೀಡಿದರು. ಪುರಸಭೆ ಮುಖ್ಯಾಧಿಕಾರಿ ಧರಣೇಂದ್ರಕುಮಾರ್ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.
January 10, 2025