ದಾವಣಗೆರೆ, ನ.1- ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಕೊಡ ಮಾಡುವ `ವಿದ್ಯಾ ಸರಸ್ವತಿ’ ಪ್ರಶಸ್ತಿಗೆ ಭಾಜನರಾಗಿರುವ ಶಿಕ್ಷಕಿ – ಸಾಹಿತಿ ಶ್ರೀಮತಿ ಎ.ಸಿ.ಶಶಿಕಲಾ ಶಂಕರಮೂರ್ತಿ ಅವರಿಗೆ ನಗರದ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಆವರಣದಲ್ಲಿ ಮೊನ್ನೆ ನಡೆದ ಕಲಾಕುಂಚದ ಕನ್ನಡ ಮಕ್ಕಳ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಕಾರ್ಯಾಧ್ಯಕ್ಷ ಡಾ. ಕಿಕ್ಕೇರಿ ಕೃಷ್ಣಮೂರ್ತಿ, ಸಾಹಿತಿ ಡಾ. ಹೆಚ್.ವಿ.ವಾಮದೇವಪ್ಪ, ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಜಸ್ಟಿನ್ ಡಿಸೋಜಾ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ಹೆಚ್.ಎಸ್.ಮಂಜುನಾಥ್ ಕುರ್ಕಿ, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.