ಹರಿಹರ, ಜು31- ನಗರದಲ್ಲಿ ಗ್ರಾಮಾಂತರ ಠಾಣೆಯ ಪಿಎಸ್ಐ ಮತ್ತು ಎಎಸ್ಐ ಸೇರಿದಂತೆ 17 ವ್ಯಕ್ತಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಹಶೀಲ್ದಾರ್ ಕೆ. ಬಿ. ರಾಮಚಂದ್ರಪ್ಪ ತಿಳಿಸಿದ್ದಾರೆ. ನಗರದಲ್ಲಿ ಇಲ್ಲಿಯವರೆಗೆ ಒಟ್ಟು 335 ವ್ಯಕ್ತಿಗಳಿಗೆ ಕೊರೊನಾ ಹರಡಿಕೊಂಡಿದೆ. ಪಿಎಸ್ಐ ಮತ್ತು ಎಎಸ್ಐಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಗ್ರಾಮಾಂತರ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
February 25, 2025