ರಾಜನಹಳ್ಳಿ ವಾಲ್ಮೀಕಿ ಗುರು ಪೀಠದಲ್ಲಿ ಜಾತ್ರೆ : ವಿಶೇಷ ಸಭೆ

ಮಲೇಬೆನ್ನೂರು, ನ.9- ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಭಾನುವಾರ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ರಾಜ್ಯ ಪರಿಶಿಷ್ಟ ಪಂಗಡದ ನೌಕರರ ಸಂಘದ ಪದಾಧಿಕಾರಿಗಳು, ಸಾಹಿತಿಗಳು, ಲೇಖಕರೊಂದಿಗೆ 2021ರ ವಾಲ್ಮೀಕಿ ಜಾತ್ರೆ ಅಂಗವಾಗಿ ವಿಶೇಷ ಸಭೆ ನಡೆಸಿದರು. ಸಭೆಯ ಆರಂಭದಲ್ಲಿ ಮೀಸಲಾತಿ ನಮ್ಮ ಸಂವಿಧಾನಬದ್ಧ ಹಕ್ಕು ವಿಷಯದ ಕುರಿತು ದಲಿತ ಮುಖಂಡ ಮಾರಸಂದ್ರ ಮುನಿಯಪ್ಪ ಅವರು ವಿಶೇಷ ಉಪನ್ಯಾಸ ನೀಡಿದರು.

ಸಭೆಯಲ್ಲಿ ಶ್ರೀಮಠದ ವತಿಯಿಂದ ಪ್ರಾಥಮಿಕ ಶಾಲೆಯಿಂದ ಉನ್ನತ ಶಿಕ್ಷಣದವರೆಗೂ ಸಮುದಾಯದ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಉದ್ದೇಶದಿಂದ `ಏಕಲವ್ಯ ವಿದ್ಯಾನಿಧಿ’ ಎಂಬ ಯೋಜನೆ ಜಾರಿಗೊಳಿಸುವ ಬಗ್ಗೆ ನೌಕರರ ಜೊತೆ ಸುದೀರ್ಘ ಚರ್ಚೆ ನಡೆಸಲಾಯಿತು. 

ಮಠದ ಆಡಳಿತಾಧಿಕಾರಿ ಟಿ.ಓಬಳಪ್ಪ, ಸಾಹಿತಿ ಪ್ರೊ|| ಎ.ಬಿ.ರಾಮಚಂದ್ರಪ್ಪ, ಪ್ರಸನ್ನ, ನೌಕರರ ಸಂಘದ ರಾಜ್ಯಾಧ್ಯಕ್ಷ ತಿಪ್ಪೇಸ್ವಾಮಿ, ಕಾರ್ಯದರ್ಶಿ ರಾಜಶೇಖರ್, ಉಪಾಧ್ಯಕ್ಷ ಕೆ.ನಾಗರಾಜ್, ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ನಾಯಕ, ಕಾರ್ಯದರ್ಶಿ ಗೋವಿಂದರಾಜ್, ಗುಡ್ಡಪ್ಪ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

 

error: Content is protected !!