ಹೊನ್ನಾಳಿ, ನ.9- ಇಲ್ಲಿನ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷರಾಗಿ ಸೋಮವಾರ 14 ನೇ ವಾರ್ಡ್‌ನ ಕೆ.ವಿ ಶ್ರೀಧರ್, ಉಪಾಧ್ಯಕ್ಷರಾಗಿ 7ನೇ ವಾರ್ಡ್‌ನ ರಂಜಿತ ಚನ್ನಪ್ಪ ಇವರುಗಳು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಪಂಚಾಯಿತಿ ಅಧಿಕಾರವನ್ನು ಬಿಜೆಪಿ ಪಡೆದುಕೊಂಡಿದೆ.
ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಗೆ ಅಭ್ಯರ್ಥಿಗಳಿಂದ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಚುನಾವಣಾಧಿಕಾರಿ ತಹಶೀಲ್ದಾರ್ ತುಷಾರ್ ಬಿ. ಹೊಸೂರು ಅವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿರುವುದಾಗಿ ಘೋಷಿಸಿದರು.
ಈ ಸಂದರ್ಭದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ರೇಣುಕಾಚಾರ್ಯ, ಜಿ.ಪಂ. ಅಧ್ಯಕ್ಷೆ ದೀಪಾ ಜಗದೀಶ್, ಪಟ್ಟಣ ಪಂಚಾಯಿತಿ ಸದಸ್ಯರು ನಾಮಿನಿ ಸದಸ್ಯರು ಉಪಸ್ಥಿತರಿದ್ದರು.