ರಾಣೇಬೆನ್ನೂರು, ನ.13- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನಾ ಕಚೇರಿಯಲ್ಲಿ ಮೊನ್ನೆ ಏರ್ಪಡಿಸಿದ್ದ ಜ್ಞಾನತಾಣ ಕಾರ್ಯಕ್ರಮವನ್ನು ಬಸವಶ್ರೀ ಗ್ರಾಮೀಣಾಭಿವೃಧ್ಧಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಭಾರತಿ ಜಂಬಿಗಿ ಉದ್ಘಾಟಿಸಿದರು. ಓಂ ಪಬ್ಲಿಕ್ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ರುಕ್ಮಿಣಿ ಸಾಹುಕಾರ ಅವರು ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಿದರು. ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ನಿತ್ಯಾನಂದ ಕುಂದಾಪುರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಿದರು. ತಾಲ್ಲೂಕು ಯೋಜನಾಧಿಕಾರಿ ಸತೀಶ್ ಶೇಟ್ ಪ್ರಾಸ್ತಾ ವಿಕ ನುಡಿಗಳನ್ನಾಡಿದರು. ಶಶಿಕಲಾ ಸ್ವಾಗತಿಸಿದರು. ಮಂಜುನಾಥ್ ವಂದಿಸಿದರು.
January 11, 2025