ಮಲೇಬೆನ್ನೂರು, ನ.13-ಪಟ್ಟಣದ ಗ್ರಾಮ ದೇವತೆ ಶ್ರೀ ಏಕನಾಥೇಶ್ವರಿ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿದ್ದ ಸಂಪೂರ್ಣ ವರಮಹಾಲಕ್ಷ್ಮಿ ಸಂಸ್ಥಾಪಕರಾದ ಬ್ರಹ್ಮಾಂಡ ಗುರೂಜಿ ಶ್ರೀ ನರೇಂದ್ರ ಬಾಬು ಶರ್ಮ ಅವರು ಹೆಮ್ಮಾರಿ ಕೊರೊನಾ ಸಂಪೂರ್ಣ ನಿಯಂತ್ರಣಕ್ಕಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅವರು ದೇವಸ್ಥಾನದ ಅರ್ಚಕ ಪ್ರಕಾಶಾಚಾರ್ ಮನೆಗೆ ಭೇಟಿ ನೀಡಿದ್ದರು. ಪುರಸಭೆ ಮುಖ್ಯಾಧಿಕಾರಿ ಧರಣೀಂದ್ರಕುಮಾರ್, ಗ್ರಾಮ ಲೆಕ್ಕಾಧಿಕಾರಿ ಕೊಟ್ರೇಶ್ ಮತ್ತಿತರರು ಈ ವೇಳೆ ಗುರೂಜಿ ಅವರನ್ನು ಭೇಟಿ ಮಾಡಿದ್ದರು.
January 8, 2025