ದಾವಣಗೆರೆ, ನ.19- ನಗರದ ಬಿ.ಎಸ್. ಚನ್ನಬಸಪ್ಪ ಅಂಡ್ ಸನ್ಸ್ ವತಿಯಿಂದ ಸಂಸ್ಥೆಯ ಶಾಖೆಯಾದ ಬಿ.ಎಸ್.ಸಿ. ಎಕ್ಸ್‍ಕ್ಲೂಸಿವ್ ಶೋ ರೂಮ್ ಆವರಣದಲ್ಲಿ ನಿನ್ನೆ ಏರ್ಪಡಿಸಿದ್ದ ಕನ್ನಡ ರಾಜ್ಯೋ ತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಸಾಧಕರಾದ ಕಲಾಕುಂಚ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ, ಗಾನಶ್ರೀ ಸಂಗೀತ ಶಾಲೆಯ ಪ್ರಾಚಾರ್ಯರಾದ ವಿದುಷಿ ಶ್ರೀಮತಿ ಸಂಗೀತಾ ರಾಘವೇಂದ್ರ, ಹಿರಿಯ ಪತ್ರಕರ್ತ ಬಕ್ಕೇಶ್ ನಾಗನೂರು ಅವರುಗಳನ್ನು ಸನ್ಮಾನಿಸಲಾಯಿತು. ಬಿ.ಎಸ್.ಚನ್ನಬಸಪ್ಪ ಅಂಡ್ ಸನ್ಸ್ ಮಾಲೀಕ ಬಿ.ಸಿ. ಶಿವಕುಮಾರ್, ಶ್ರೀಮತಿ ದೀಪಾ ಶಿವಕುಮಾರ್, ಬಿ.ಯು. ಚಂದ್ರಶೇಖರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
January 10, 2025