ರೈತರ ಹೋರಾಟಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಬೆಂಬಲ

ದಾವಣಗೆರೆ, ಡಿ.5- ದೆಹಲಿಯಲ್ಲಿನ ರೈತರ ಹೋರಾಟ ಬೆಂಬಲಿಸಿ ಹಾಗೂ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರು ನಗರದಲ್ಲಿ ನಿನ್ನೆ ಪ್ರತಿಭಟನೆ ನಡೆಸಿದರು.

ಮಹಾತ್ಮ ಗಾಂಧಿ ವೃತ್ತದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿ ಯರ ಫೆಡರೇಷನ್ (ಎಐಸಿಯುಸಿ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು, ಹೋ ರಾಟದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸುತ್ತಿರುವ ರೈತರನ್ನು ಪೊಲೀಸರ ಮೂಲಕ ರೈತ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿರುವ ಕೇಂದ್ರ ಸರ್ಕಾ ರದ ನಡೆ ಸರಿಯಲ್ಲ ಎಂದು ತೀವ್ರವಾಗಿ ವಿರೋಧಿಸಿದರು.

ಕೂಡಲೇ ರೈತರ ಬೇಡಿಕೆಗಳಾದ ನೂತನ ಕೃಷಿ ಕಾಯ್ದೆ ಅಡಿಯಲ್ಲಿ ಜಾರಿಗೆ ತಂದಿರುವ ಎಪಿಎಂಸಿ ಕಾಯ್ದೆ, ವಿದೇಶಿ ಬೀಜ ಕಾಯ್ದೆ, ಭೂಸುಧಾರಣಾ ಹೆಸರಿನಲ್ಲಿ ರೈತಾಪಿ ಜನರನ್ನು ಬೀದಿಗೆ ತಳ್ಳುವ ಕಾಯ್ದೆ, ರೈತರಿಗೆ ಮಾರಕವಾಗುವ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ಎಂ.ಬಿ. ಶಾರದಮ್ಮ, ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಮಲ್ಲಮ್ಮ, ಖಜಾಂಚಿ ವಿಶಾಲಾಕ್ಷಿ ಮೃತ್ಯುಂಜಯ, ರೇಣುಕಮ್ಮ, ಸಿ.ಬಿ. ಕಾಳಮ್ಮ, ಕೆ. ಸುಧಾ, ಅಂಬುಜ, ಜ್ಯೋತಿ, ರಾಧಾ, ಮಂಗಳ, ಭಾಗ್ಯಲಕ್ಷ್ಮಿ, ಅಂಜಿನಮ್ಮ ಸೇರಿದಂತೆ ಇತರರು ಭಾಗವಹಿಸಿದ್ದರು.

error: Content is protected !!