ಅಗ್ನಿ ಶಾಮಕ ದಳಕ್ಕೆ 13.5 ಲಕ್ಷ ರೂ. `ಸ್ಮಾರ್ಟ್’ ಸಲಕರಣೆ

ದಾವಣಗೆರೆ, ಡಿ. 5 – ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 13.5 ಲಕ್ಷ ರೂ.ಗಳ ಮೌಲ್ಯದ ಉಪಕರಣಗಳನ್ನು  ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರು ಅಗ್ನಿಶಾಮಕ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಜಿಲ್ಲಾಡಳಿತ ಭವನ ಆವರಣದಲ್ಲಿ ಈ ಸಮಾರಂಭ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್, ಮೇಯರ್ ಬಿ.ಜಿ. ಅಜಯ್ ಕುಮಾರ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಸವಪ್ರಭು ಶರ್ಮ ಮತ್ತಿತರರು ಉಪಸ್ಥಿತರಿದ್ದರು.

error: Content is protected !!