ಶಾಶ್ವತ ಅನುದಾನ ರಹಿತ ಖಾಸಗಿ ಶಾಲೆಗಳ, ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಮನವಿ

ದಾವಣಗೆರೆ, ಡಿ.13-  ಶಾಶ್ವತ ಅನುದಾನ ರಹಿತ ಖಾಸಗಿ ಶಾಲೆಗಳ ಹಾಗೂ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಪದವೀಧರ ಕ್ಷೇತ್ರದ   ವಿಧಾನ ಪರಿಷತ್ತಿನ ನೂತನ ಸದಸ್ಯ ಚಿದಾನಂದಗೌಡ ಮತ್ತು ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ ಅವರುಗಳನ್ನು ಜಿಲ್ಲಾ ಖಾಸಗಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ ಒತ್ತಾಯಿಸಿದೆ. 

ಚಿದಾನಂದ ಗೌಡ ಮತ್ತು ನಾರಾಯಣ ಸ್ವಾಮಿ ಅವರುಗಳನ್ನು ಇಂದಿಲ್ಲಿ ಭೇಟಿ ಮಾಡಿದ ಜಿಲ್ಲಾ ಖಾಸಗಿ ಅನುದಾನ ರಹಿತ ಶಾಲೆಯ ಆಡಳಿತ ಮಂಡಳಿಯ ಗೌರವ ಅಧ್ಯಕ್ಷ ಕಂದ ನಕೋವಿ ಪ್ರಕಾಶ್, ಅಧ್ಯಕ್ಷ ವೀರಭದ್ರ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಹೆಚ್.ಜಿ. ಪ್ರಕಾಶ್, ಸಂಘಟನಾ ಕಾರ್ಯ ದರ್ಶಿ ಅಬ್ದುಲ್ ಮತ್ತಿತರರು ಶೀಘ್ರವೇ ಎಲ್ಲಾ ಸಮಸ್ಯೆ ಗಳನ್ನು ಬಗೆಹರಿಸುವಂತೆ ಲಿಖಿತ ಮನವಿ ಪತ್ರ ಸಲ್ಲಿಸಿದರು.

error: Content is protected !!