15ನೇ ವಾರ್ಡಿನಲ್ಲಿ ಪಾಲಿಕೆ ಸದಸ್ಯರಿಂದ ಸಿಸಿ ರಸ್ತೆ ಕಾಮಗಾರಿ ವೀಕ್ಷಣೆ

ದಾವಣಗೆರೆ, ಡಿ.20- ನಗರ ಪಾಲಿಕೆಯ 15ನೇ ವಾರ್ಡ್‌ನ ದೇವರಾಜ ಅರಸು ಬಡಾವಣೆ `ಎ’ ಬ್ಲಾಕ್ ಹೊಸ ಕೋರ್ಟ್ ಪಕ್ಕದಲ್ಲಿ ಸಿಸಿ ರಸ್ತೆ ಹಾಗೂ ಡ್ರೈನೇಜ್ ಕಾಮಗಾರಿ ನಡೆಯುತ್ತಿದ್ದು, ಈ ವಾರ್ಡಿನ ಪಾಲಿಕೆ ಸದಸ್ಯರಾದ ಶ್ರೀಮತಿ ಆಶಾ ಉಮೇಶ್ ಅವರು ಇಂದು ಕಾಮಗಾರಿಯನ್ನು ಪರಿಶೀಲಿಸಿದರು. ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರಿಗೆ ಕಾಮಗಾರಿ ಕಳಪೆ ಮಾಡದಂತೆ ಸರಿಯಾಗಿ ಕೆಲಸ ನಿರ್ವಹಿಸಿ ಎಂದು ತಾಕೀತು ಮಾಡಿದರು. ಇದೇ ಸಂದರ್ಭದಲ್ಲಿ ಉಮಾಶಂಕರ್‌, ವೀರಯ್ಯ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

error: Content is protected !!