ದಾವಣಗೆರೆ, ಡಿ.20- ಕುರುಬ ಜನಾಂಗದ ಎಸ್ಟಿ ಮೀಸ ಲಾತಿ ಹೋರಾಟದ ಬೃಹತ್ ಸಮಾವೇಶಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರಿಗೆ ಎಸ್ಟಿ ಹೋ ರಾಟ ಸಮಿತಿ ಮನವಿ ಸಲ್ಲಿಸಿತು.
ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಬೇಡಿಕೆ ಇಟ್ಟುಕೊಂಡು ಬರುವ ಜನವರಿ 6 ರಂದು ದಾವಣಗೆರೆಯಲ್ಲಿ ದಾವಣಗೆರೆ, ಚಿತ್ರದುರ್ಗ, ಹಾವೇರಿ ಭಾಗದ ಬೃಹತ್ ಸಮಾವೇಶ ಹಮ್ಮಿಕೊಂಡಿರುವ ಪ್ರಯುಕ್ತ ಸಮಾವೇಶಕ್ಕೆ ನಗರದ ಹೈಸ್ಕೂಲ್ ಮೈದಾನವನ್ನು ಆಯ್ಕೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಅನುಮತಿ ಕೋರಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರಿಗೆ ಕುರುಬ ಎಸ್ಟಿ ಹೋರಾಟ ಸಮಿತಿ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯ ಜೆ.ಸಿ. ನಿಂಗಪ್ಪ, ಮಾಜಿ ಮೇಯರ್ ಹೆಚ್.ಎನ್. ಗುರುನಾಥ್, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ಜಿ. ಗಣೇಶಪ್ಪ, ಶಿವಣ್ಣ ಮೇಸ್ಟ್ರು, ಕರಿಗಾರ್ ಮಂಜುನಾಥ್ ಸೇರಿದಂತೆ ಇತರರು ಇದ್ದರು.