ದಾವಣಗೆರೆ, ಆ.19- ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಗೆ ನೆರವಾಗುವ ನಿಟ್ಟಿನಲ್ಲಿ ನಗರದ ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯವು ಐದು ಹಂತದಲ್ಲಿ ಆನ್ಲೈನ್ ಅಣಕು ಪರೀಕ್ಷೆಯನ್ನು ಆರಂಭಿಸಿದ್ದು, ಇತ್ತೀಚೆಗೆ ನಡೆಸಿದ ಕಿರು ಸಮಾರಂಭದಲ್ಲಿ ಬಹುಮಾನ ಮತ್ತು ಪ್ರಶಂಸಾ ಪತ್ರವನ್ನು ವಿತರಿಸಲಾಯಿತು.
5 ಹಂತದ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಮೊದಲ 10 ವಿದ್ಯಾರ್ಥಿ ಗಳಿಗೆ ಹಾಗೂ 5 ಹಂತಗಳಲ್ಲಿ ಹೆಚ್ಚು ಅಂಕ ಗಳಿಸಿದ ಮೊದಲ ಮೂವರು ವಿದ್ಯಾರ್ಥಿಗಳಿಗೆ ಬಹುಮಾನ, ಪ್ರಶಂಸನಾ ಪತ್ರ ವಿತರಿಸಲಾಯಿತು. ಕಾಲೇಜು ಆಡಳಿತ ಮಂಡಳಿ ಪ್ರತಿನಿಧಿ ವೈ.ಯು. ಸುಭಾಷ್ಚಂದ್ರ, ಕಾಲೇಜು ಪ್ರಾಂಶುಪಾಲ ಡಾ. ವೈ. ವಿಜಯಕುಮಾರ್ ಮತ್ತು ಕಾಲೇಜು ಶೈಕ್ಷಣಿಕ ಡೀನ್ ಡಾ. ಬಿ.ಎಸ್. ಸುನೀಲ್ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.