ದಾವಣಗೆರೆ, ಆ. 19 – ಗ್ರಾಮದ ಪ್ರತಿಯೊಬ್ಬರು ಉಳಿತಾಯ ಖಾತೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯನ್ನು ಮಾಡಿಸಲು ಮುಂದಾಗಬೇಕು ಎಂದು ಚಿತ್ರದುರ್ಗ ಅಂಚೆ ವಿಭಾಗದ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪ ಹೇಳಿದರು.
ಮಂಗಳವಾರ ಚಿಕ್ಕಬೂದಿಹಾಳ್ ಗ್ರಾಮದಲ್ಲಿ ನೂತನ ಶಾಖಾ ಅಂಚೆ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಇಲಾಖೆಯ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಹಾಯಕ ಅಂಚೆ ಅಧೀಕ್ಷಕ ಜೆ.ಎಸ್.ಗುರುಪ್ರಸಾದ ಪ್ರಾಸ್ತಾವಿಕವಾಗಿ ಮಾತನಾಡಿ, ಅಂಚೆ ಕಚೇರಿಯ ಸೌಲಭ್ಯಗಳ ಕುರಿತು ವಿವರಿಸಿದರು. ಜೊತೆಗೆ ಅಂಚೆ ಕಚೇರಿಯನ್ನು ಉಳಿಸಿಕೊಳ್ಳವ ಬಗ್ಗೆ ಗ್ರಾಮಸ್ಥರ ಪಾತ್ರವನ್ನು ಮನವರಿಕೆ ಮಾಡಿಕೊಟ್ಟರು.
ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷ ಸಂಗನಗೌಡ ಹಾಗೂ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಭಗತ್‍ಸಿಂಹ ಮಾತನಾಡಿದರು.
ಮಾರುಕಟ್ಟೆ ಅಧಿಕಾರಿ ಮಹೇಶ್ ಕಾರ್ಯಕ್ರಮ ನಿರೂಪಿಸಿದರು.