ಮಲೇಬೆನ್ನೂರು, ಆ.21- ಹೆಲ್ಪಿಂಗ್ ಹ್ಯಾಂಡ್ಸ್ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ವತಿಯಿಂದ ಎಕ್ಕೆಗೊಂದಿ ಮತ್ತು ಕುಂಬಳೂರು ಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಸ್ಯಾನಿಟೈಸ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ಮತ್ತು ಸ್ಪೀಕರ್ಗಳನ್ನು ಉಚಿತವಾಗಿ ವಿತರಿಸಲಾಯಿತು. ಸಂಸ್ಥೆ ಅಧ್ಯಕ್ಷ ಮೂರ್ತಿ ಹಾಗೂ ಕಾರ್ಯದರ್ಶಿ ಮಂಜುನಾಥ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಕುಂಬಳೂರು ಶಾಲೆ ಎಸ್ ಡಿ ಎಂ ಸಿ ಅಧ್ಯಕ್ಷ ಎಂ. ಎಚ್. ಶರಣ್ ಹಾಗೂ ಶಿಕ್ಷಕರು ಹಾಜರಿದ್ದರು.
December 24, 2024