ದಾವಣಗೆರೆ, ಆ.21- ಕರ್ನಾಟಕ ಹಾಗೂ ಯುಜಿಸಿ ಆದೇಶದಂತೆ ಪ್ರಥಮ ಹಾಗೂ ದ್ವಿತೀಯ ವರ್ಷದ ಕಾನೂನು ಪರೀಕ್ಷೆಗಳನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೆಷನ್ (ಎಸ್ ಎಫ್ ಐ) ಜಿಲ್ಲಾ ಸಮಿತಿ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು. ನಂತರ ಉಪವಿಭಾಗಾಧಿಕಾರಿಗಳ ಮೂಲಕ ಹುಬ್ಬಳ್ಳಿಯ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಕುಲಸಚಿವರಿಗೆ ಮನವಿ ಸಲ್ಲಿಸಿದರು.
ವಿದ್ಯಾರ್ಥಿಗಳ ದೃಷ್ಟಿಯಿಂದ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ವತಿಯಿಂದ ಪರೀಕ್ಷೆ ನಡೆಸಲು ಮುಂದಾಗಿರುವ ಕ್ರಮವನ್ನು ಈ ಕೂಡಲೇ ಹಿಂಪಡೆಯಬೇಕೆಂದು ಎಸ್ ಎಫ್ ಐ ಜಿಲ್ಲಾ ಸಂಚಾಲಕ ಲಕ್ಷ್ಮಣ್ ರಾಮಾವತ್ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಹ ಸಂಚಾಲಕ : ರಾಕೇಶ್, ಸಲ್ಲಾವುದ್ದಿನ್, ಕಾನೂನು ವಿದ್ಯಾರ್ಥಿಗಳಾದ ವೆಂಕಟ್ ನಾಯ್ಕ, ವೀಘ್ನೇಶ್, ಮಂಜುನಾಥ, ಗುರುಬಸವರಾಜ್, ಹರೀಶ್ ಸೇರಿದಂತೆ ಇತರರು ಭಾಗವಹಿಸಿದ್ದರು.