ಎಂಇಎಸ್ ಪುಂಡಾಟಿಕೆ ಖಂಡಿಸಿ ಪ್ರತಿಭಟನೆ

ದಾವಣಗೆರೆ, ಆ.29- ಬೆಳಗಾವಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ಅನಾವರಣ ಮಾಡುವ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಮೇಲೆ ಮತ್ತು ಕನ್ನಡಿಗರ ಮೇಲೆ ಎಂಇಎಸ್ ಪುಂಡರು ಚಪ್ಪಲಿ ತೂರಾಟ ಮಾಡಿರುವುದನ್ನು ತೀವ್ರವಾಗಿ ಖಂಡಿಸಿ ಕರ್ನಾಟಕ ಯುವಶಕ್ತಿ ವೇದಿಕೆಯಿಂದ ನಗರದಲ್ಲಿ ನಿನ್ನೆ ಪ್ರತಿಭಟನೆ ನಡೆಸಲಾಯಿತು.

ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮುಖಾಂತರ ಉಪವಿಭಾಗಾಧಿಕಾರಿ ಕಛೇರಿಗೆ ತೆರಳಿ ಉಪವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. 

ಪ್ರತಿಭಟನೆಯಲ್ಲಿ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಜಿ. ಮಲ್ಲೇಶ್, ಜಿಲ್ಲಾಧ್ಯಕ್ಷ ಎಸ್. ರಾಜು, ತಾಲ್ಲೂಕು ಅಧ್ಯಕ್ಷ ಕೆ. ಪರಶುರಾಮ್, ಕೆ. ಚಂದ್ರು, ರಂಗಸ್ವಾಮಿ, ಮುರುಗೇಶ್, ಎಂ.ಕೆ. ಶ್ರೀಕಾಂತ್, ರಾಜ್ಯ ವಕ್ತಾರ ಹೆಚ್.ಬಿ. ವಿಜಯಕುಮಾರ,  ಸಿ. ಜಾನಪ್ಪ, ಜಿ. ಹನುಮಂತ, ಪ್ರವೀಣ್, ಸುನೀಲ್, ಅನಿಲ್ ಸೇರಿದಂತೆ ಇತರರು ಭಾಗವಹಿಸಿದ್ದರು.

error: Content is protected !!