ದಾವಣಗೆರೆ, ಸೆ.2- ಜಿಲ್ಲಾಡಳಿತದ ಸಹಯೋಗದೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದೀಪಾ ಜಗದೀಶ್, ಉಪಾಧ್ಯಕ್ಷರಾದ ಶ್ರೀಮತಿ ಸಾಕಮ್ಮ ಗಂಗಾಧರನಾಯ್ಕ್, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಆರ್ಯ ಈಡಿಗ ಸಮಾಜದ ಅಧ್ಯಕ್ಷ ಹೆಚ್.ಶಂಕರ್, ಕಾರ್ಯದರ್ಶಿ ಎ.ನಾಗರಾಜ್, ಖಜಾಂಚಿ ಇ.ದೇವೇಂದ್ರಪ್ಪ, ಜಂಟಿ ಕಾರ್ಯದರ್ಶಿ ಭರಮಪ್ಪ, ಸದಸ್ಯರಾದ ಗೋವಿಂದರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮತ್ತಿತರರು ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.