ದಾವಣಗೆರೆ,ಸೆ.17- ನಗರದ ಜಿಲ್ಲಾಡಳಿತ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ವಿಶ್ವಕರ್ಮ ಜಯಂತಿಯನ್ನು ನಡೆಸಲಾಯಿತು. ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದೀಪಾ ಜಗದೀಶ್, ಉಪಾಧ್ಯಕ್ಷರಾದ ಶ್ರೀಮತಿ ಸಾಕಮ್ಮ, ಜಿ.ಪಂ ಉಪ ಕಾರ್ಯದರ್ಶಿ ಆನಂದ್, ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷ ಬಸಾಪುರದ ನಾಗೇಂದ್ರಚಾರ್, ಕಾರ್ಯದರ್ಶಿ ಬಿ.ಬಿ ಶಿವಾನಂದ, ವಿ.ಎಂ ಕೊಟ್ರೇಶ್, ಖಜಾಂಚಿ ಬೇತೂರು ವಿಜಯಕುಮಾರ್, ನಿರ್ದೇಶಕರಾದ ಬೇತೂರು ಮಂಜುನಾಥ್, ಬಿ. ಸಿದ್ದಾಚಾರ್, ಕನ್ನಡ ಮತ್ತು ಸಂಸ್ಕೃತಿ ಇಲಾ ಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಮತ್ತಿತರರು ಉಪಸ್ಥಿತರಿದ್ದರು.
February 26, 2025