ಮಲೇಬೆನ್ನೂರು, ಜು. 6 – ಹೊಸಳ್ಳಿಯ ಎಸ್.ಎಂ.ವಿ.ಪಿ.ಯು. ಕಾಲೇಜಿನಲ್ಲಿ ವಿಶ್ವ ಪ್ರಾಣಿಜನ್ಯ ರೋಗಗಳ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು. ಜಿಲ್ಲಾ ರೋಗಶಾಸ್ತ್ರ ತಜ್ಞರಾದ ಡಾ. ಶುಕ್ಲಾ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶು ಪಾಲರಾದ ರೇವಣಪ್ಪ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ. ಉಮ್ಮಣ್ಣ, ಕ್ಷೇತ್ರ ಆರೋಗ್ಯ ಶಿಕ್ಷಣಾ ಧಿಕಾರಿ ಎಲ್. ನಾಗರಾಜ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ರಾಜಪ್ಪ , ಮಂಜುನಾಥ ದೊಡ್ಡಮನಿ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಶ್ರೀಮತಿ ಕರ್ಲಿನ್, ಆರೋಗ್ಯ ಇಲಾಖೆಯ ದಾದಾಪೀರ್, ಅಕ್ಷಯ್ ಕುಮಾರ್ ಮತ್ತು ಇತರರು ಪಾಲ್ಗೊಂಡಿದ್ದರು.
December 23, 2024