ದಾವಣಗೆರೆ, ಡಿ. 6 -ಡ್ರೋನ್ ಆಧಾರಿತ ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ತರಬೇತಿ ನೀಡಲು ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತರು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದಾವಣಗೆರೆ, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ದಾವಣಗೆರೆ, ಜಗಳೂರು, ಚನ್ನಗಿರಿ ತಾಲ್ಲೂಕು ಹಾಗೂ ಸಹಾಯಕ ನಿರ್ದೇಶಕರು, (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಹರಿಹರ ಮತ್ತು ಹೊನ್ನಾಳಿ ಕಚೇರಿಯಲ್ಲಿ ಪಡೆದು, ಇದೇ ದಿನಾಂಕ 11 ರೊಳಗಾಗಿ ಸಲ್ಲಿಸಬೇಕು.