ಹೊನ್ನಾಳಿ, ಫೆ.8 – ತಾಲ್ಲೂಕಿನ ಚಿಕ್ಕಹಾಲಿವಾಣ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ಮಹಾ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ಬೆಳಗ್ಗೆ 10.30ಕ್ಕೆ ವಿಜೃಂಭಣೆಯಿಂದ ನೆರವೇರಿತು. ಇದಕ್ಕೂ ಮೊದಲು ಬೆಳಿಗ್ಗೆ 9ಕ್ಕೆ ಉಚ್ಚಾಯ ಮಹೋತ್ಸವ ಪಾರಂಪರಿಕ ಶ್ರದ್ಧಾ-ಭಕ್ತಿಗಳಿಂದ ನೆರವೇರಿತು.
ಚಿಕ್ಕಹಾಲಿವಾಣ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ಮಹಾ ರಥೋತ್ಸವದಲ್ಲಿ ಹರಿಹರ ತಾಲ್ಲೂಕಿನ ಹಿರೇಹಾಲಿವಾಣ ಗ್ರಾಮದ
ಶ್ರೀ ಹಾಲೇಶ್ವರ ಸ್ವಾಮಿ, ಶ್ರೀ ಕರಿಯಮ್ಮ ದೇವಿ ಉತ್ಸವ ಮೂರ್ತಿಗಳು ಪಾಲ್ಗೊಂಡಿದ್ದವು. ಭಕ್ತರಿಗೆ ಅನ್ನ ಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿತ್ತು.