Category: ಚಿತ್ರದಲ್ಲಿ ಸುದ್ದಿ

Home ಚಿತ್ರದಲ್ಲಿ ಸುದ್ದಿ

ಬಿಜೆಪಿಯಿಂದ ವಿಶ್ವ ಮಹಿಳಾ ದಿನಾಚರಣೆ

ನಗರದ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ವಿಶ್ವ ಮಹಿಳಾ ದಿನವನ್ನು ಆಚರಿಸಲಾಯಿತು. ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮಂಜುಳ ಮಹೇಶ್ ಅಧ್ಯಕ್ಷತೆ ವಹಿಸಿದ್ದರು.

ಹದಡಿಯಲ್ಲಿ ಶಿವರಾತ್ರಿ ಕಾರ್ಯಕ್ರಮ

ತಾಲ್ಲೂಕಿನ ಹದಡಿ ಗ್ರಾಮದ ಪ್ರಜಾಪಿತ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಮಹಾಶಿವರಾತ್ರಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕುಸ್ತಿ ಪಂದ್ಯಕ್ಕೆ ಅಖಾಡ ಸಿದ್ಧತೆ

ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಪ್ರಯುಕ್ತ ಹಮ್ಮಿಕೊಂಡಿರುವ ಕುಸ್ತಿ ಪಂದ್ಯಕ್ಕೆ ಸಿದ್ಧಗೊಳ್ಳುತ್ತಿರುವ ಅಖಾಡವನ್ನು ನಗರ ಪಾಲಿಕೆ ಮಹಾಪೌರರಾದ ಶ್ರೀಮತಿ ಜಯಮ್ಮ ಗೋಪಿನಾಯ್ಕ, ನಗರ ಪಾಲಿಕೆ ಸದಸ್ಯ ಕೆ.ಎಂ. ವೀರೇಶ್ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.

ಪುಟ್ಟಮ್ಮಗೆ ಗೈಡ್ಸ್ ಸಂಸ್ಥೆ ಶ್ರದ್ಧಾಂಜಲಿ

ಇತ್ತೀಚೆಗೆ ನಿಧನರಾದ ಜಿಲ್ಲಾ ಗೈಡ್ ಆಯುಕ್ತರಾದ ಶ್ರೀಮತಿ ಪುಟ್ಟಮ್ಮ ಮಹಾರುದ್ರಯ್ಯ ಅವರಿಗೆ ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಇಂದು ಶ್ರದ್ದಾಂಜಲಿ ಸಲ್ಲಿಸಲಾಯಿತು.

ಶ್ರೀ ಮುರುಡ ಬಸವೇಶ್ವರ ರಥೋತ್ಸವ

ಮಲೇಬೆನ್ನೂರು ಹಳ್ಳಿಹಾಳ್ ಗ್ರಾಮದ ಆರಾಧ್ಯ ದೈವ ಶ್ರೀ ಮುರುಡ ಬಸವೇಶ್ವರ ದೇವರ ರಥೋತ್ಸವ ಗುರುವಾರ ಸಂಜೆ ಸಂಭ್ರಮದಿಂದ ಜರುಗಿತು, ವಿವಿಧ ಕಲಾ ಮೇಳಗಳು ರಥೋ ತ್ಸವಕ್ಕೆ ಮೆರಗು ತಂದವು.

ನಗರ ದೇವತೆ ದುರ್ಗಾಂಬಿಕಾ ಜಾತ್ರೆ : ಡ್ರೋಣ್ ಪರಿಶೀಲನೆ

ಬರುವ ದುರ್ಗಾಂಬಿಕ ಜಾತ್ರೆ ಹಿನ್ನೆಲೆಯಲ್ಲಿ ಬಂದೋಬಸ್ತ್ ಹಾಗೂ ಮುಂಜಾಗ್ರತಾ ಕ್ರಮವಾಗಿ ಹದ್ದಿನ ಕಣ್ಣಿಡುವ ಸಲುವಾಗಿ ಬಳಸುವ ಡ್ರೋಣ್ ಕ್ಯಾಮರಾವನ್ನು ನಗರದ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಹತ್ತಿರ ನಗರ ಉಪವಿಭಾಗದ ಡಿವೈಎಸ್ಪಿ ನರಸಿಂಹ ವಿ. ತಾಮ್ರಧ್ವಜ ಅವರು ಪರೀಕ್ಷಿಸಿದರು. ಈ ವೇಳೆ ಅಧಿಕಾರಿ ಮತ್ತು ಸಿಬ್ಬಂದಿಗಳು ಇದ್ದರು.

error: Content is protected !!