ಪುಟ್ಟಮ್ಮಗೆ ಗೈಡ್ಸ್ ಸಂಸ್ಥೆ ಶ್ರದ್ಧಾಂಜಲಿ
ಇತ್ತೀಚೆಗೆ ನಿಧನರಾದ ಜಿಲ್ಲಾ ಗೈಡ್ ಆಯುಕ್ತರಾದ ಶ್ರೀಮತಿ ಪುಟ್ಟಮ್ಮ ಮಹಾರುದ್ರಯ್ಯ ಅವರಿಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಇಂದು ಶ್ರದ್ದಾಂಜಲಿ ಸಲ್ಲಿಸಲಾಯಿತು.
ಇತ್ತೀಚೆಗೆ ನಿಧನರಾದ ಜಿಲ್ಲಾ ಗೈಡ್ ಆಯುಕ್ತರಾದ ಶ್ರೀಮತಿ ಪುಟ್ಟಮ್ಮ ಮಹಾರುದ್ರಯ್ಯ ಅವರಿಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಇಂದು ಶ್ರದ್ದಾಂಜಲಿ ಸಲ್ಲಿಸಲಾಯಿತು.
ಮಲೇಬೆನ್ನೂರು ಹಳ್ಳಿಹಾಳ್ ಗ್ರಾಮದ ಆರಾಧ್ಯ ದೈವ ಶ್ರೀ ಮುರುಡ ಬಸವೇಶ್ವರ ದೇವರ ರಥೋತ್ಸವ ಗುರುವಾರ ಸಂಜೆ ಸಂಭ್ರಮದಿಂದ ಜರುಗಿತು, ವಿವಿಧ ಕಲಾ ಮೇಳಗಳು ರಥೋ ತ್ಸವಕ್ಕೆ ಮೆರಗು ತಂದವು.
ಬರುವ ದುರ್ಗಾಂಬಿಕ ಜಾತ್ರೆ ಹಿನ್ನೆಲೆಯಲ್ಲಿ ಬಂದೋಬಸ್ತ್ ಹಾಗೂ ಮುಂಜಾಗ್ರತಾ ಕ್ರಮವಾಗಿ ಹದ್ದಿನ ಕಣ್ಣಿಡುವ ಸಲುವಾಗಿ ಬಳಸುವ ಡ್ರೋಣ್ ಕ್ಯಾಮರಾವನ್ನು ನಗರದ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಹತ್ತಿರ ನಗರ ಉಪವಿಭಾಗದ ಡಿವೈಎಸ್ಪಿ ನರಸಿಂಹ ವಿ. ತಾಮ್ರಧ್ವಜ ಅವರು ಪರೀಕ್ಷಿಸಿದರು. ಈ ವೇಳೆ ಅಧಿಕಾರಿ ಮತ್ತು ಸಿಬ್ಬಂದಿಗಳು ಇದ್ದರು.
ರಷ್ಯಾ – ಉಕ್ರೇನ್ ಸಂಘರ್ಷದಲ್ಲಿ ಬಲಿಯಾದ ತಾಲ್ಲೂಕಿನ ಚಳಗೇರಿಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಅವರ ಮನೆಗೆ ಸಾಂತ್ವನ ಹೇಳಲು ಬಂದ ಮಾಜಿ ಸಚಿವ ಬಸವರಾಜ ಶಿವಣ್ಣನವರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕೋಳಿವಾಡ ಅವರು ನವೀನ್ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿದರು.
ಯುಕ್ರೇನ್‌ನಲ್ಲಿ ನಡೆದ ಶೆಲ್ ದಾಳಿಯಲ್ಲಿ ಮೃತಪಟ್ಟ ರಾಣೇಬೆನ್ನೂರು ತಾಲ್ಲೂಕು ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಅವರ ನಿವಾಸಕ್ಕೆ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ನಗರ ಪಾಲಿಕೆಯ 33ನೇ ವಾರ್ಡಿನಲ್ಲಿ ನಡೆದ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆ ಸದಸ್ಯರಾದ ಕೆ.ಎಂ. ವೀರೇಶ್ ಚಾಲನೆ ನೀಡಿದರು. ಆಶಾ ಕಾರ್ಯಕರ್ತೆ ಸುಹಾಸಿನಿ ಮತ್ತಿತರರು ಉಪಸ್ಥಿತರಿದ್ದರು.
ಚಿಕ್ಕೋಳ್ ಈಶ್ವರಪ್ಪ ಅವರ ಸುದೀರ್ಘ ಸೇವೆಯನ್ನು ಪರಿಗಣಿಸಿ ಬೆಂಗಳೂರಿನ ಕರ್ನಾಟಕ ಜನತಾ ಸೇನಾ ದಳದ ರಾಜ್ಯ ಸಮಿತಿಯು ಬೆಂಗಳೂರಿನ ನಯನ ಸಭಾಂಗಣ (ಕನ್ನಡ ಭವನ) ದಲ್ಲಿ ಇತ್ತೀಚಿಗೆ ನಡೆದ ಸಿದ್ಧಗಂಗಾ ಶ್ರೀ ನೆನಪು ಕಾರ್ಯಕ್ರಮ ಹಾಗೂ ಸಿದ್ಧಗಂಗಾ ಶ್ರೀ ನೆನಪು ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭದಲ್ಲಿ ‘ಸಿದ್ಧಗಂಗಾ ಶ್ರೀ ಸದ್ಭಾವನಾ’ ರಾಷ್ಟ್ರೀಯ ಪ್ರಶಸ್ತಿಯನ್ನು ಅವರಿಗೆ ಪ್ರದಾನ ಮಾಡಲಾಯಿತು.
ನಗರದ ರಾಘವೇಂದ್ರ ಹೈಟೆಕ್ ಪಿಯು ಕಾಲೇಜಿನ ಶ್ರೀ ಶಾರದಾ ಮೆಡಿಕಲ್ ಅಕಾಡೆಮಿಯ ಪ್ರಥಮ ಪಿಯುಸಿ ವಿದ್ಯಾರ್ಥಿ ಪಿ. ಅಜಯ್ ಮುಂದಿನ ತಿಂಗಳು ಮಲೇಷ್ಯಾದಲ್ಲಿ ನಡೆಯುವ ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಚಿತ್ರದುರ್ಗ : ಜೈನ ಗುರುಗಳಾದ ಥಾಣೆಯ ಸಾದ್ವಿ ಶ್ರೀ ಪ್ರಮೀಳಾ ಕುಮಾರಿಜಿ, ಆಸ್ತಾ ಶ್ರೀಜಿ, ವಿಘ್ಯಾ ಪ್ರಭಾಜಿ ನಗರದ ಮುರುಘಾ ಮಠಕ್ಕೆ ಆಗಮಿಸಿ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಭೇಟಿಯಾಗಿ ಜೈನಧರ್ಮ ಹಾಗು ವಿವಿಧ ಧರ್ಮಗಳ ನಡುವಿನ ಧಾರ್ಮಿಕ ಸಮನ್ವಯತೆ ಮತ್ತು ಪ್ರಸ್ತುತ ಬೆಳವಣಿಗೆ ಕುರಿತು ಚರ್ಚಿಸಿದರು.
ಹೊನ್ನಾಳಿ : ಪುಲ್ವಾಮ ದಾಳಿಯಂತಹ ಪ್ರಕರಣಗಳು ಮತ್ತೆ ಮರುಕಳಿಸದಂತೆ ಕೇಂದ್ರ ಸರ್ಕಾರವು ವಿಶೇಷ ಗಮನಹರಿಸಬೇಕು ಎಂದು ಪುರಸಭಾ ಸದಸ್ಯ ಹೊಸಕೇರಿ ಸುರೇಶ್ ಒತ್ತಾಯಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ನಗರದ ಬಾಪೂಜಿ ಎಂ.ಬಿ.ಎ. ಕಾಲೇಜು ಮೈದಾನದ ಹೆಲಿಪ್ಯಾಡ್‌ಗೆ ಆಗಮಿಸಿದ್ದ ಸಂದರ್ಭದಲ್ಲಿ ನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಸವಿತಾ ಗಣೇಶ್ ಹುಲ್ಲುಮನೆ ಮತ್ತು ಯುವ ಕಾಂಗ್ರೆಸ್ ಮುಖಂಡ ಗಣೇಶ್ ಹುಲ್ಲುಮನೆ ದಂಪತಿ ಆತ್ಮಿಯವಾಗಿ ಬರ ಮಾಡಿಕೊಂಡರು.
ಹೊನ್ನಾಳಿ : ದೊಡ್ಡಪೇಟೆ ವಿಠ್ಠಲ ರುಖುಮಾಯಿ 104 ನೇ ದಿಂಡಿ ಉತ್ಸವದ ರಥೋತ್ಸವ ಭಾನುವಾರ ನಡೆಯಿತು.