ತುಂಗಭದ್ರಾ ನದಿಗೆ ನೀರು : ಸಾರ್ವಜನಿಕರು ಎಚ್ಚರದಿಂದಿರಲು ಸೂಚನೆ
ಬಹುಗ್ರಾಮ ಕುಡಿಯುವ ನೀರು ಯೋಜನೆ, ಜಾತ್ರಾ ಮಹೋತ್ಸವದ ಉದ್ದೇಶದಿಂದ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದ್ದು, ಸಾರ್ವಜನಿಕರು ನದಿ ದಂಡೆಗೆ ಬಾರದಂತೆ, ದಾಟದಂತೆ ಎಚ್ಚರಿಕೆ ವಹಿಸಬೇಕೆಂದು ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಅಧೀಕ್ಷಕ ಇಂಜಿನಿಯರ್ ತಿಳಿಸಿದ್ದಾರೆ.