ಹರಿಹರ : ವಸತಿ ಸೌಲಭ್ಯಕ್ಕೆ ಆಗ್ರಹಿಸಿ ದಸಂಸ ನೇತೃತ್ವದಲ್ಲಿ ಪಾದಯಾತ್ರೆ
ಹರಿಹರ : ತಾಲ್ಲೂಕಿನ ಭಾನುವಳ್ಳಿ ಗ್ರಾಮದ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯದವರಿಗೆ ವಸತಿ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ದಸಂಸ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ನೇತೃತ್ವದಲ್ಲಿ ಭಾನುವಳ್ಳಿ ಗ್ರಾಮದಿಂದ ನಗರದ ತಾಲ್ಲೂಕು ಕಚೇರಿವರೆಗೆ ಪಾದಯಾತ್ರೆ ನಡೆಸಿ ತಹಶೀಲ್ದಾರರಿಗೆ ಮನವಿ ನೀಡಲಾಯಿತು.