ಸಾಹಿತ್ಯ ಪರಿಷತ್ ಭವನದಲ್ಲಿ ರಂಗನಾಥ್ ಹೆಸರು ಉಳಿಯಲಿ: ತರಳಬಾಳು ಶ್ರೀಗಳು
ಶಿಕ್ಷಣ ತಜ್ಞ, ಸಾಹಿತಿ ಪ್ರೊ. ಎಸ್.ಬಿ. ರಂಗನಾಥ್ ಅವರ ಪರಿಶ್ರಮದಿಂದಾಗಿ ನಗರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಭವನ ನಿರ್ಮಾಣವಾಗಿದೆ. ಭವನದಲ್ಲಿ ಅವರ ಹೆಸರು ಉಳಿಯುವಂತೆ ಕ್ರಮ ತೆಗೆದುಕೊಳ್ಳಬೇಕಿದೆ ಎಂದು ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.